ಬಂಟ್ವಾಳ: ತಾಲೂಕಿನಲ್ಲಿ ಕಳೆದೆರಡು ದಿನಗಳಲ್ಲಿ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಸಜಿಪನಡು ಗ್ರಾಮದ ಬೈಲಗುತ್ತುವಿನ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಯಿಂದಾಗಿ ಕೆಲವು ಮನೆಗಳಉ ಜಲಾವೃತಗೊಂಡ ಘಟನೆ ನಡೆದಿದೆ.
ಕೆಲವು ಮನೆಯ ಒಳಗೂ ನೀರು ನುಗ್ಗಿದ ಹಿನ್ನಲೆಯಲ್ಲಿ. ಜೆಸಿಬಿ ಮೂಲಕ ಚರಂಡಿಯನ್ನು ಅಗಲ ಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಣು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಸಿಬ್ಬಂದಿ ಅಶೋಕ್, ಶೀತಲ್ ಉಪಸ್ಥಿತರಿದ್ದರು.ನೇತ್ರಾವತಿಯಲ್ಲಿ ಹೆಚ್ಚಿದ ನೀರಿನ ಹರಿವು: ನಿರಂತರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿಯು ನೀರಿನ ಹರಿವು ಹೆಚ್ಚಾಗಿದೆ.
