ಬಂಟ್ವಾಳ: ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜು. ೧೦ರಂದು ಬಂಟ್ವಾಳಕ್ಕೆ ಆಗಮಿಸಿ ಎಸೆಸೆಲ್ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಸಚಿವರು ಎಸೆಸೆಲ್ಸಿ ಪರೀಕ್ಷೆ ಯಶಸ್ವಿಯಾದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.
ssk-main
ಬೆಳಗ್ಗೆ ೧೧ಕ್ಕೆ ಬಂಟ್ವಾಳಕ್ಕೆ ಆಗಮಿಸಲಿರುವ ಸಚಿವರು ೧೨ ಗಂಟೆಗೆ ಪೊಳಲಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಜತೆಗೆ ಬಂಟ್ವಾಳದಲ್ಲಿ ಎಸೆಸೆಲ್ಸಿ ಪರೀಕ್ಷೆಯ ಯಶಸ್ವಿಗೆ ಶ್ರಮಿಸಿದವರಿಗೆ ಸಚಿವರು ಕೃತಜ್ಞತೆ ಅರ್ಪಿಸಲಿದ್ದಾರೆ.

By suddi9

Leave a Reply

Your email address will not be published. Required fields are marked *