ಬಂಟ್ವಾಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡಿನ ಕಾರ್ಮಿ ನಿರೀಕ್ಷಕರ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು .
ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ನೀಡಬೇಕು, ಕಲ್ಯಾಣ ಮಂಡಳಿಯು ಕೋವಿಡ್ ಪರಿಹಾರದ ಲೆಕ್ಕ ನೀಡಬೇಕು , ಕೋವಿಡ್ ಪರಿಹಾರಕ್ಕೆ ಅರ್ಜಿ ಹಾಕಲು ಬಾಕಿ ಇರುವ ಕಾರ್ಮಿಕರಿಗೆ ಅರ್ಜಿ ಹಾಕಲು ಅವಕಾಶ ನೀಡುವಂತೆ ಒತ್ತಾಯಿಸಲಾಯಿತು. ಸಂಘಟನೆಯ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿದರು.ಬಳಿಕ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಮನವಿ ಸಲ್ಲಿಸಲಾಯಿತು.ನ್ಯಾಯವಾದಿ ಮಹಮ್ಮದ್ ಗಝಾಲಿ ಸ್ವಾಗತಿಸಿದರು, ಪ್ರತಿಭಟನೆಯ ನೇತೃತ್ವವನ್ನು ಮುಖಂಡರಾದ ಉದಯಕುಮಾರ್ ಬಂಟ್ವಾಳ, ಸುರೇಂದ್ರ ಕೋಟ್ಯಾನ್ , ಸಾಮಾಜಿಕ ಕಾರ್ಯಕರ್ತರಾದ ರಾಜಾ ಚೆಂಡ್ತಿಮಾರ್ , ಮಹಮ್ಮದ್ ಹನೀಫ್ , ದಿನೇಶ್ ಆಚಾರಿ ಮಾಣಿ, ಲಿಯಾಕತ್ ಖಾನ್ ವಹಿಸಿದ್ದರು.—
