ಮಂಗಳೂರು: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಕರ್ನಾಟಕ ಸರಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ನಡೆಯುತ್ತಿರುವ ಗ್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ ಹಾಗೂ ವಸ್ತುಪ್ರದರ್ಶನವನ್ನು ಮಂಗಳವಾರ ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ವೀಕ್ಷಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಜತೆಗಿದ್ದರು.

