ಶ್ರೀನಿವಾಸಪುರ:ಕೋವಿಡ್-19 ಹಿನ್ನಲೆಯಲ್ಲಿ ಈ ಭಾರಿ ಸಾಮಾಜಿಕ ಅಂತರ ಹಾಗೂ ಮಾಸ್ಕ್‍ನ್ನು ಧರಿಸಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದರು.gur-aug-4-Bharath shetty

ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ 74 ನೇ ವರ್ಷದ ಸ್ವಾತಂತ್ರನೇ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಸ್.ಎಂ.ಶ್ರೀನಿವಾಸ್ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‍ನ್ನು ಹಾಕಿಕೊಂಡು ಬರಬೇಕು ಜೊತೆಗೆ ತಮ್ಮ ಕಛೇರಿಗಳಲ್ಲಿಯೇ ಧ್ವಜಾರೋಹಣವನ್ನು ನೆರವೇರಿಸಿ ಬೆಳಗ್ಗೆ 9 ಗಂಟೆಗೆ ತಾಲ್ಲೂಕು ತಹಶೀಲ್ದಾರ್ ಕಛೇರಿಗೆ ಆಗಮಿಸಬೇಕು ತದನಂತರ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಗುವುದು ಎಂದರು.

ಈ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಹಾಜರಾಗಬೇಕು ಸ್ವಾತಂತ್ರ ದಿನಾಚರಣೆ ಪ್ರಯುಕ್ತ ತಮ್ಮ ತಮ್ಮ ಕಛೇರಿಗಳಿಗೆ ಒಂದು ದಿನದ ಮುಂಚೆಯೇ ವಿದ್ಯುತ್ ದೀಪಾ ಲಂಕಾರವನ್ನು ಮಾಡಿಕೊಳ್ಳತಕ್ಕದ್ದು, ಈ ಕಾರ್ಯಕ್ರಮದಲ್ಲಿ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರನ್ನು ಸನ್ಮಾನಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಸ್.ಆನಂದ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಕುಮಾರ್, ಸಿಪಿಐ ರಾಘವೇಂದ್ರ ಪ್ರಕಾಶ್, ಅಪ್ಪಿರೆಡ್ಡಿ, ಬಿಇಒ ಉಮಾದೇವಿ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *