ಮಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ತಾಯಿ ಕಮಲಾ(90) ಶನಿವಾರ ಮುಂಜಾನೆ ಅನಾರೋಗ್ಯದ ಹಿನ್ನೆಲೆಯಲ್ಲಿ ದೇವರಗುಂಡದ ತಮ್ಮ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.

ಕಮಲಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ತನ್ನ ಮಗಳನ್ನು ಕಳೆದುಕೊಂಡಿದ್ದ ಕಮಲಾ ಅವರು ಖಿನ್ನರಾಗಿದ್ದರು ಎನ್ನಲಾಗಿದೆ. ಕಮಲಾ ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ದೇವರಗುಂಡದ ಸ್ವಗೃಹದಲ್ಲಿ ಇರಿಸಲಾಗಿದೆ.
