ಗುರುಪುರ : ಗುರುಪುರದ ಸರ್ಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಇತ್ತೀಚೆಗೆ ಲಯನ್ಸ್ ಕ್ಲಬ್ ಮೆಟ್ರೋ ಗೋಲ್ಡ್ ವತಿಯಿಂದ ವನಮಹೋತ್ಸವ ಆಚರಿಸಲಾಯಿತು.ಮಾಜಿ ಸೈನಿಕ ಸುಬೇದಾರ್ ಶಶಿಧರ ಆಳ್ವ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಆಳ್ವ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕಾವ, ನಿವೃತ್ತ ಪೊಲೀಸ್ ಜಿ ಕೆ ನರಸಿಂಹ ಪೂಜಾರಿ, ಜಲಜಾ, ಕಿಟ್ಟಣ್ಣ ರೈ, ಪ್ರಾಂಶುಪಾಲ ಚಂದ್ರಶೇಖರ, ಮುಖ್ಯಶಿಕ್ಷಕಿ ರೂಪಾ ಡಿ ಉಪಸ್ಥಿತರಿದ್ದರು. ಮೆಟ್ರೋ ಗೋಲ್ಡ್ ಅಧ್ಯಕ್ಷ ಕಾರಮೊಗರುಗುತ್ತು ಜಿ ಕೆ ಹರಿಪ್ರಸಾದ ರೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪದ್ಮನಾಭ ಕುಮಾರ್ ಸ್ವಾಗತಿಸಿ, ವಂದಿಸಿದರು.
