ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟುವಿನಲ್ಲಿ ಐದು ದಿನಗಳ ಕಾಲ ನಡೆಯುವ 17 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೊರೋನ ಹಿನ್ನಲೆಯಲ್ಲಿ ಈ ಬಾರಿ ಒಂದೇ ದಿನಕ್ಕೆ ಸೀಮಿತವಾಗಿತ್ತು. ಬಡ್ಡಕಟ್ಟೆಯಲ್ಲಿ ಶ್ರೀ ಸೀತಾರಾಮ ಸೇವಾ ಮಂದಿರದಲ್ಲಿ ಗಣೇಶ ಚತುರ್ಥಿಯಂದು ಬೆಳಿಗ್ಗೆ ಶ್ರೀಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.ವೇ.ಮೂ.ಸುದರ್ಶನ್ ಬಲ್ಲಾಳ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. 

ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಮಜತರ್ಪಣೆ ನಡೆಯಿತು.ಸಂಜೆ ವಿಸರ್ಜನಾ ಪೂಜೆಯ ಬಳಿಕ ಸೀತಾರಾಮ ಸೇವಾ ಮಂದಿರದ ಬಾವಿಯಲ್ಲಿ ಶ್ರೀಗಣೇಶನ ವಿಗ್ರಹವನ್ನು ವಿಸರ್ಜಿಸಲಾಯಿತು.ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಧ್ಯಕ್ಷ, ಜಿಪಂ ಸದಸ್ಯ ಪದ್ಮಶೇಖರ ಜೈನ್,ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,ಪುರಸಭಾ ಸದಸ್ಯರಾದ ವಾಸು ಪೂಜಾರಿ,ಗಂಗಾಧರ,ಲೋಲಾಕ್ಷ ಶೆಟ್ಟಿ,ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಪದಾಧಿಕಾರಿಗಳಾದ ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಪ್ರವೀಣ್ ಕಿಣಿ,ಮಧುಸೂದನ್ ಶೆಣ್ಯೆ,ಪ್ರವೀಣ್ ಕುಲಾಲ್ ,ಮಹಾಬಲ ಬಂಗೇರ,ವೆಂಕಪ್ಪ ಪೂಜಾರಿ ಬಂಟ್ವಾಳ,ಜಗನ್ನಾಥ ತುಂಬೆ ಮೊದಲಾದವರಿದ್ದರು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅತ್ಯಂತ ಸರಳವಾಗಿ ೧೭ ನೇ ವರ್ಷದ ಗಣೇಶೋತ್ಸವವನ್ನು ಆಚರಿಸಲಾಯಿತು.

