ಬಂಟ್ವಾಳ : ಉಪತಹಸೀಲ್ದಾರ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಪುತ್ತೂರು ನಿವಾಸಿ ಶ್ರೀಧರ್ ಕೆ. (48) ಭಾನುವಾರ ನಸುಕಿನ ವೇಳೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರಲ್ಲದೆ ಗಾಯಕರು ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು.
ಕಂದಾಯ ಇಲಾಖೆಯಲ್ಲಿ ಕಳೆದ ಇಪ್ಪತ್ತು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದು,ಗ್ರಾಮಕರಣಿಕರಾ
ಇವರ ನಿಧನಕ್ಕೆ ತಹಶೀಲ್ದಾರ್ ರಶ್ಮೀ ಎಸ್.ಆರ್.,ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳ ತಾಲೂಕು ಕಚೇರಿಯ ಸಿಬ್ಬಂದಿಗಳು ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.
