ಬಂಟ್ವಾಳ: ಬಂಟ್ವಾಳ ಕ್ಷೇತ್ರದ  ಕೊಳ್ನಾಡು ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಮುಖರ ಸಭೆಯು ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆಯಿತು.    ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಲಗುತ್ತು ಅವರ ಅದ್ಯಕ್ಷತೆ ವಹಿಸಿದ್ದರು.IMG-20200921-WA0040

ಕೊಳ್ನಾಡು ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಯವರು ಗ್ರಾಮದ ವಾಸ್ತವಿಕ ಮಾಹಿತಿಯನ್ನು  ಕಾರ್ಯಕರ್ತರಿಂದ ಪಡೆದು,ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಯಾವ ರೀತಿ ಎದುರಿಸಬಹುದೆಂಬುದರ ಬಗ್ಗೆ  ಮಾರ್ಗದರ್ಶನ ನೀಡಿದರು. ಮುಂದಿನ ದಿನಗಳಲ್ಲಿ ನಡೆಯುವ ಪಕ್ಷದ ಸೇವಾ ಸಪ್ತಾಹ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವ ಕುರಿತು  ಮಂಡಲ ಬಿಜೆಪಿ ಪ್ರಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಹಾಗೂ ಡೊಂಬಯ್ಯ ಅರಳ ಅವರು ಮಾಹಿತಿಯನ್ನು ನೀಡಿದರು.

ಮಂಡಲ ಚುನಾವಣಾ ಸಹ ಪ್ರಭಾರಿಗಳಾದ ಪ್ರಭಾಕರ ಪ್ರಭು, ಕೊಳ್ನಾಡು ಮಹಾಶಕ್ತಿಕೇಂದ್ರ ಪ್ರ.ಕಾರ್ಯದರ್ಶಿ ಲೋಹಿತ್,ತಾಲೂಕು ಪಂಚಾಯತ್ ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಜಯರಾಮ್ ನಾಯ್ಕ್ ಕುಂಟ್ರಕಲ, ಮಂಡಲ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಟ್ಟತ್ತಿಲ ಕೋಡಿ,ಮಂಡಲ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಶ್ರೀಲತಾ ಶೆಟ್ಟಿ ಪಟ್ಲ, ಪಕ್ಷದ ವಿವಿಧ ಜವಾಬ್ದಾರಿಯುತ ಪ್ರಮುಖರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಬೂತ್ ಅಧ್ಯಕ್ಷರು -ಪ್ರಧಾನಕಾರ್ಯದರ್ಶಿಗಳು ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಗಣೇಶ್ ಆಚಾರ್ಯ ಮಂಚಿ ಸ್ವಾಗತಿಸಿದರು. ಯೋಗೀಶ್ ಕುಂಟ್ರಕಲ  ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *