ಗುರುಪುರ : ಇತ್ತೀಚೆಗೆ ಸುರಿದ ಧಾರಾಕಾರ ಗಾಳಿ-ಮಳೆಗೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮಗಳಲ್ಲಿ ಸಂಭವಿಸಿದ ಮಳೆ ಹಾನಿ 16 ಕುಟುಂಬಗಳಿಗೆ ಗುರುಪುರ ಕೈಕಂಬದ ನಾಡಕಚೇರಿಯಲ್ಲಿ ಉಪ-ತಹಶೀಲ್ದಾರ್ ಶಿವಪ್ರಸಾದ್ ಸರ್ಕಾರದಿಂದ ಮಂಜೂರಾಗಿರುವ ಪರಿಹಾರ ಚೆಕ್ ವಿತರಿಸಿದರು.
ಮೂಳೂರಿನ 11 ಕುಟುಂಬ ಹಾಗೂ ಅಡ್ಡೂರಿನ 5 ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಲಾದ ಸಂದರ್ಭದಲ್ಲಿ ಜಿಪಂ ಸದಸ್ಯ ಯು ಪಿ ಇಬ್ರಾಹಿಂ, ತಾಪಂ ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ಜಿ ಎಂ ಉದಯ ಭಟ್, ಸದಸ್ಯರಾದ ಕೆ ಸದಾಶಿವ ಶೆಟ್ಟಿ ಕೆ, ಹನೀಫ್ ಮತ್ತಿತರರು ಉಪಸ್ಥಿತರಿದ್ದರು.
