ಬಂಟ್ವಾಳ:  ಬೆಳಗಾವಿ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರು, ಕೇಂದ್ರ ಸರಕಾರದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರರಾದ ಸುರೇಶ್ ಚೆನ್ನಬಸಪ ಅಂಗಡಿ ಹಾಗೂ  ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ  ಬಿ. ನಾರಾಯಣ ರಾವ್ ಅವರ ಅಕಾಲಿಕ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು  ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಮಿತ್ರ ನಾರಾಯಣ ರಾವ್ ಅವರ ಸಾವು ಅತೀವವಾದ ನೋವಿನ ಮತ್ತು ದುಃಖದ ವಿಷಯವಾಗಿದ್ದು, ಇವರುಗಳ ನಿಧನದಿಂದ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದ ನಷ್ಟವಾಗಿರುತ್ತದೆ. ಇವರುಗಳ ಅಕಾಲಿಕ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಇವರುಗಳ ಕುಟುಂಬಗಳಿಗೆ ನೀಡಲಿ ಎಂದು ಶಾಸಕ ರಾಜೇಶ್ ನಾಯ್ಕ್    ಪ್ರಾರ್ಥಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *