ಬಂಟ್ವಾಳ:ಇಲ್ಲಿನ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾಯೋಜನೆಯ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ.ರವರು ಮಾತನಾಡಿ ಗಾಂಧೀಜಿಯವರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತ, ಅವುಗಳನ್ನು ಅಳವಡಿಸಿಕೊಂಡು ಬಾಳುವುದರಿಂದ ಒಂದು ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಅವರು ಗಾಂಧೀಜಿಯವರ ಜೀವನ ಕ್ರಮ, ಆದರ್ಶಗಳು ಮತು ಸಾಧನೆಗಳ ಬಗ್ಗೆ ತಿಳಿಸಿದರು. ಯೋಜನಾಧಿಕಾರಿ ಶಶಿಕಲಾ ಎಂ.ಪಿ. ಸ್ವಾಗತಿಸಿ, ಇನ್ನೋರ್ವ ಯೋಜನಾಧಿಕಾರಿ ವಿನಯ ಕುಮಾರ್ ಸಿ ವಂದಿಸಿದರು ಕುಮಾರಿ ಗೌತಮಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಕಾಲೇಜು ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
