ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಮತ್ತು ಆಧಾರ್ ಕಾಡರ್್ ನಿಮರ್ಾತೃ ನಂದನ್ ನೀಲೆಕಣಿ ಕಾಂಗ್ರೆಸ್ ಟಿಕೆಟ್ನಲ್ಲಿ ಮುಂದಿನ ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ.
ನೀಲೆಕಣಿ ಚುನಾವಣಾ ಸ್ಪಧರ್ೆಯ ಬಗ್ಗೆ ಹಬ್ಬಿದ್ದ ಊಹಾಪೋಹಗಳಿಗೆ ಈ ಬೆಳವಣಿಗೆಯಿಂದ ತೆರೆಬಿದ್ದಂತಾಗಿದೆ. ನಿಲೇಕಣಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪಧರ್ಿಸಲಿದ್ದಾರೆ. ಬಿಜೆಪಿಯಿಂದ ಈ ಹಿಂದಿನ ಚುನಾವಣೆಗಳಲ್ಲಿ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಬೆಂಗಳುರು.ದ.ದಿಂದ ಸ್ಪಧರ್ಿಸಿದ್ದು ಈ ಬಾರಿ ಅವರು ತಮ್ಮ ಕ್ಷೇತ್ರವನ್ನು ಬದಲಾಯಿಸುವ ಮಾತುಗಳನ್ನಾಡುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ನೀಲೆಕಣಿ ರಾಜಕೀಯ ಪ್ರವೇಶಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದು ಕಾಂಗ್ರೆಸ್ ಟಿಕೆಟ್ ನೀಡಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪಧರ್ಿಸುವ ಆಶಯ ವ್ಯಕ್ತಪಡಿಸಿದ್ದರು.
