ಕೈಕಂಬ:ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ವ್ಯಾಪ್ತಿಯಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿಯಿಂದ “ಕುಟುಂಬ ಮಿಲನ” ಕಾರ್ಯಕ್ರಮವು ನಡೆಯಿತು.
ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಪಂಚಾಯತ್ ಚುನಾವಣೆ ಪೂರ್ವಭಾವಿಯಾಗಿ ಪಕ್ಷವು ಈ ಭಾಗದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರೂ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ,ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಶೆಟ್ಟಿ,ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಕಾರ್ಯದರ್ಶಿಯಾದ ಅನಿಲ್ ಕುಮಾರ್ , ಎಡಪದವು ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ ಬೇಕಲ್, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದರು.
