ಕೈಕಂಬ:ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಡುಪೆರಾರ ವ್ಯಾಪ್ತಿಯಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿಯಿಂದ “ಕುಟುಂಬ ಮಿಲನ” ಕಾರ್ಯಕ್ರಮವು ನಡೆಯಿತು.

ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಪಂಚಾಯತ್ ಚುನಾವಣೆ ಪೂರ್ವಭಾವಿಯಾಗಿ ಪಕ್ಷವು ಈ ಭಾಗದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು, ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

IMG-20201009-WA0040

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ,ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಕಾರ್ಯದರ್ಶಿಯಾದ ಅನಿಲ್ ಕುಮಾರ್ , ಎಡಪದವು ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ ಬೇಕಲ್, ಮಂಗಳೂರು ನಗರ ಉತ್ತರ ಮಂಡಲದ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಅಮಿತಾ ಶೆಟ್ಟಿ, ಶಕ್ತಿಕೇಂದ್ರ ಪ್ರಮುಖರಾದ ಶೇಖರ ಸಪಳಿಗ,ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಅನುರಾಜ್, ಮಂಗಳೂರು ನಗರ ಉತ್ತರ ಮಂಡಲದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕಾಶಿನಾಥ್ ಕಾಮತ್, ಮಂಗಳೂರು ನಗರ ಉತ್ತರ ಹಿಂದುಳಿದ ವರ್ಗದ ಸದಸ್ಯ ಜಯಂತ ಸುಂಕದಕಟ್ಟೆ ಮಾಜಿ ಪಂಚಾಯತ್ ಸದಸ್ಯರಾದ ಸೀತಾರಾಮ್ ಗೌಡ, ಮೋಹನ್ ಕಬೆತ್ತಿಗುತ್ತು, ಸುಂಕದಕಟ್ಟೆ, ಹರಿಪ್ರಸಾದ್ ಪುನ್ಕೆದಡಿ, ಶಕ್ತಿಕೇಂದ್ರ ಅಧ್ಯಕ್ಷರು, ಕಾರ್ಯದರ್ಶಿ, ಸಹಿತ ಹಿರಿಯ ಮುಖಂಡರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *