ಬಡಗಬೆಳ್ಳೂರು: ಭಾರತೀಯ ಜನತಾ ಪಾರ್ಟಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ದ್ರಷ್ಟಿಯಿಂದ ಹಮ್ಮಿಕೊಂಡಿರುವ ಬಿಜೆಪಿ ಕುಟುಂಬ ಮಿಲನ್ ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಂತೆ ಅ.11ರಂದು ಭಾನುವಾರ ಬೆಳಿಗ್ಗೆ ಗಂಟೆ 9:30ಕ್ಕೆ ಸರಿಯಾಗಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬಡಗಬೆಳ್ಳೂರು ಇದರ ವಠಾರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಭಾರತೀಯ ಜನತಾ ಪಾರ್ಟಿ ಬಂಟ್ವಾಳದ ಮಂಡಲಾಧ್ಯಕ್ಷರಾದ ದೇವಪ್ಪ ಪೂಜಾರಿ ಬಾಳಿಕೆಯವರು, ಚುನಾವಣಾ ಪ್ರಭಾರಿಗಳು ಹಾಗೂ ಮಂಡಲ ಸ್ತರದ ಅನ್ಯನ್ಯ ಜವಾಬ್ದಾರಿಯಲ್ಲಿರುವ ಅನೇಕ ನಾಯಕರುಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ.ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಬಂಧುಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ನರೇಂದ್ರ ಮೋದಿಜಿಯವರ ಕನಸಿನ ಭಾರತ ನವನಿರ್ಮಾಣ ಸಂಕಲ್ಪಕ್ಕೆ ಸಾಕ್ಷಿಯಾಗಬೇಕೆಂದು ಬಡಗಬೆಳ್ಳೂರು ಬೂತ್ ಸಂಖ್ಯೆ- 38 ರ ಬಿಜೆಪಿಯ ಪ್ರಕಟನೆ ತಿಳಿಸಿದೆ.
ವಿ.ಸೂ:ಕಾರ್ಯಕ್ರಮದ ಕೊನೆಯಲ್ಲಿ ಕ್ಷೇತ್ರದ ಶಾಸಕರು ಸಾರ್ವಜನಿಕರಿಂದ ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
