ಬಂಟ್ವಾಳ: ಕಳ್ಳಿಗೆ ವಲಯ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಹಾಗೂ ಗ್ರಾಮಾಭಿವೃದ್ಧಿ ಸಂಘ ಕಳ್ಳಿಗೆ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭ ಕಾರ್ಯಕ್ರಮವನ್ನು ದ. ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮರಕೊಟ್ಲು ಭಜನಾ ಮಂದಿರದ ಅಧ್ಯಕ್ಷರಾದ ಶಶಿಧರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್,ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್,ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಎಪಿಎಂಸಿ ಸದಸ್ಯರು ದಿವಾಕರ ಪಂಬದಬೆಟ್ಟು. ಮಾಜಿ ಗ್ರಾಂ ಪಂಚಾಯತ್ ಸದಸ್ಯರಾದ ನಾರಾಯಣ ನಾಯ್ಕ್, ಮದುಸೂಧನ್,ಜಗದೀಶ್ ಕುಂಜತ್ತೂರು,ವಿಜಯ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
