ಬಂಟ್ವಾಳ:ಪೂರ್ಣಪ್ರಮಾಣದ ವೈದ್ಯರ ಸಹಿತ ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಕಲ ವ್ಯವಸ್ಥೆಯನ್ನೊಳಗೊಂಡ 100 ಬೆಡ್ ನ ಬಂಟ್ವಾಳ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಇದೀಗ ನೂತನವಾಗಿ  ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರದ ಸೇರ್ಪಡೆಯಾಗಿದೆ. IMG-20201013-WA0089

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರದ ಅಗತ್ಯತೆಯ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ  ಶಾಸಕ ರಾಜೇಶ್ ನಾಯ್ಕ್ ಅವರು ಇತ್ತೀಚೆಗೆ ಮನವರಿಕೆ  ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ  ಆಸ್ಪತ್ರೆಯೊಂದರಲ್ಲಿ ಹೆಚ್ಚುವರಿ ಇದ್ದ  ಈ ಯಂತ್ರವನ್ನು‌ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಒದಗಿಸಿದ್ದು,ಎರಡು ದಿನಗಳ ಹಿಂದೆ ಈ ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿತ್ತು.  ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಈ ಯಂತ್ರವನ್ನು ಪರಿಶೀಲಿಸಿ ವೈದ್ಯರಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು,ವೈದ್ಯಾಧಿಕಾರಿ ಡಾ.ಪುಷ್ಪಲತಾ, ಪ್ರಮುಖರಾದ ರಮಾನಾಥ ರಾಯಿ,ಸುಕೇಶ್ ಚೌಟ,ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *