ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್  ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಿಷ್ಠೆಯಿಂದ  ಕೆಲಸ ಮಾಡಿ ಬಂಟ್ವಾಳ ಕೇತ್ರದ 39 ಗ್ರಾಮ ಪಂಚಾಯತ್‌ನಲ್ಲಿಯು ಬಿಜೆಪಿ ಬೆಂಬಲಿತರ ಆಡಳಿತ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಶ್ರಮಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ  ಕರೆ ನೀಡಿದರು.
IMG-20201027-WA0010ಬಿ.ಸಿ.ರೋಡಿನ ಗೀತಾಂಜಲಿ ಸಭಾಭವನದಲ್ಲಿ ನಡೆದಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರದ ವಿಶೇಷ ಕಾರ‍್ಯಕಾರಣಿ ಸಭೆಯನ್ನು  ಉದ್ಛಾಟಿಸಿ ಮಾತನಾಡಿದ ಶಾಸಕರು,ಕೇಂದ್ರ  ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ,ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕೆಂದರು. ಬಂಟ್ವಾಳ ಕ್ಷೇತ್ರದಲ್ಲಿ ಈಗಾಗಲೇ ಕೋಟ್ಯಾಂತರ ರೂ. ಅನುದಾನ ಮಂಜೂರುಗೊಂಡು, ರಸ್ತೆ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿದೆ.
ಭವಿಷ್ಯದಲ್ಲಿ ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ  ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಸಬವೆಯ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ವಹಿಸಿದ್ದರು. ಸಭೆಯಲ್ಲಿ ಕ್ಷೇತ್ರದ ಉಸ್ತುವಾರಿ, ಜಿಲ್ಲಾ ಪ್ರ.ಕಾರ್ಯದರ್ಶಿ ಸುಧೀರ್ ಶೆಟ್ಟಿ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ್, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ  ಬಂಟ್ವಾಳ ನಗರ ಯೋಜಬಾ ಪ್ರಾಧಿಕಾರದ  ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ಕರ್ನಾಟಕ ರಾಜ್ಯದ ನೀರು ಸರಬರಾಜು ಮತ್ತು ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ ಕೆ ಭಟ್ ರವರನ್ನು ಅಭಿನಂದಿಸಲಾಯಿತು. ಕ್ಷೇತ್ರದ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರದ ಉಪಾಧ್ಯಕ್ಷವಜ್ರನಾಥ ಕಲ್ಲಡ್ಕ ವಂದಿಸಿದರು. ಪ್ರ.ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *