ಬಂಟ್ವಾಳ: ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ಗೂಡ್ಸ್ ಟೆಂಪೊ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಕಲ್ಲಡ್ಕ ನಿವಾಸಿ ವಸಂತ ಕೆ. (55) ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಬಿ.ಸಿ.ರೋಡಿನಲ್ಲಿ ಕಚೇರಿಯನ್ನು ಸುಮಾರು 25 ವರ್ಷಗಳಿಂದ ಹೊಂದಿದ್ದು, ಸಿವಿಲ್ ಇಂಜಿನಿಯರಿಂಗ್ ವೃತ್ತಿಯಲ್ಲಿದ್ದರು. 2000-01ರಲ್ಲಿ ಅವರು ಬಂಟ್ವಾಳ ಯುವವಾಹಿನಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

By suddi9

Leave a Reply

Your email address will not be published. Required fields are marked *