ಉಡುಪಿ: ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಅಪರಿಚಿತ ವ್ಯಕ್ತಿಯನ್ನು ಉಡುಪಿಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಗುರುವಾರ ದಾಖಪಡಿಸಿದ್ದರು. ಶುಕ್ರವಾರ ನಸುಕಿನ ಜಾವದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಪರಿಚಿತ ರೋಗಿಯು ಮೃತಪಟ್ಟಿದ್ದಾನೆ. ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿದೆ.

ಯುವಕನಿಗೆ ಸುಮಾರು 40 ವರ್ಷ ಪ್ರಾಯ ಅಂದಾಜಿಸಲಾಗಿದೆ. ವಿಳಾಸ ತಿಳಿದು ಬಂದಿಲ್ಲ. ವಾರಸುದಾರರು ತುರ್ತಾಗಿ ಉಡುಪಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೆಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

By suddi9

Leave a Reply

Your email address will not be published. Required fields are marked *