ಬಂಟ್ವಾಳ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಬಿ.ಸಿ.ರೋಡ್ ಘಟಕದ ವ್ಯಾಪ್ತಿಗೆ ಒಳಪಟ್ಟಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರಿಗೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರಿಗೆ ಅದಾಲತ್ ನ. ೨೦ ರಂದು ಬೆಳಿಗ್ಗೆ ೧೦.೩೦ಕ್ಕೆ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಕೆ ಎಸ್ ಆರ್ ಟಿಸಿಯ ಬಿ.ಸಿ.ರೋಡ್ ಘಟಕದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿ ಅವರು ಅದಾಲತ್ ನ ಅಧ್ಯಕ್ಷತೆ ವಹಿಸಲಿದ್ದು, ನಿಗಮದ ಪುತ್ತೂರು ಹಾಗೂ ಮಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಾರಿಗೆ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಕುಂದುಕೊರತೆ, ಸಲಹೆ-ಸೂಚನೆ ಹಾಗೂ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡುವುದರೊಂದಿಗೆ ಈ ಸಾರಿಗೆ ಅದಾಲತ್‌ನಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
