ಕೈಕಂಬ :ವಿದ್ಯಾಭಾರತಿ ಸಂಯೋಜಿತ ಎಳ್ಳಾರೆ ಶ್ರೀ ಜನಾರ್ದನ ಶಾಲೆಯ ನೂತನ ಕಟ್ಟಡದ ಭೂಮಿ ಪೂಜನ ಕಾರ್ಯಕ್ರಮವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇವರ ಸಮ್ಮುಖದಲ್ಲಿ ನಡೆಯಿತು.fc18a54d-ecdf-4cbe-aa3d-ce2c6488885c

ನಂತರ ಶಾಲಾ ಸಂಚಾಲಕ ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರುರಾಷ್ಟ್ರೀಯ ವಿಚಾರಧಾರೆಯನ್ನೊಳಗೊಂಡ ಮೌಲ್ಯ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ದೊರಕಿಸಿಕೊಡಬೇಕು.ಆ ‌ಮೂಲಕವಾಗಿ ಭಾರತೀಯ ಸಂಸ್ಕೃತಿ,ಸಂಸ್ಕಾರವನ್ನೊಳಗೊಂಡ ಪಠ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರೆ ಅವರನ್ನು ಸಂಸ್ಕಾರಯುತ ನಾಗರಿಕರನ್ನಾಗಿ ಮಾಡಲು ಸಾಧ್ಯ ಎಂದರು.57cd1548-436e-413d-9379-30a571e96961

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಎಳ್ಳಾರೆ ಬಿ. ಸದಾಶಿವ ಪ್ರಭು, ಕಾರ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಶಿಧರ್ ಜಿ. ಎಸ್, ವಿದ್ಯಾಭಾರತಿಯ ಜಿಲ್ಲಾ ಅಧ್ಯಕ್ಷರಾದ ಪಾಂಡುರಂಗ ಪೈ, ಶ್ರೀ ಜನಾರ್ದನ ಎಜುಕೇಶನ್ ಟ್ರಸ್ಟ್ ಎಳ್ಳಾರೆ ಇದರ ಅಧ್ಯಕ್ಷರಾದ ದಿನೇಶ್ ಕಿಣಿ, ಶಾಲಾ ಮುಖ್ಯ ಶಿಕ್ಷಕ ದಯಾನಂದ ನಾಯಕ್ ಹಾಗೂ ಶಾಲಾಭಿಮಾನಿಗಳು, ಹಳೆವಿದ್ಯಾರ್ಥಿಗಳು, ಊರ ಪರವೂರ ಗಣ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *