ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನ.26ರಂದು  ನಡೆಯಲಿರುವ ಗ್ರಾಮೀಣ ಭಾರತ ಬಂದ್‌ಗೆ ತಾಲ್ಲೂಕು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ಸಂಘಟನೆಗಳು ಬೆಂಬಲಿಸಿ ಭಾಗವಹಿಸುತ್ತವೆ ಎಂದು ಜಿಲ್ಲಾ ಸಿಐಟಯು ಉಪಾಧ್ಯಕ್ಷೆ ಜಿ.ಈಶ್ವರಮ್ಮ ಹೇಳಿದರು. 24svp1ep
ಪಟ್ಟಣದ ಕೆಪಿಆರ್ಎಸ್‌ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ಸರ್ಕಾರದ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಕಾರ್ಮಿಕರ ಬದುಕು ದುಸ್ತರವಾಗಿದೆ. ಕಾರ್ಮಿಕ ಕಾಯ್ದೆ ತಿದ್ದುಪಡಿ ಕಾರ್ಮಿಕರ ಪಾಲಿಗೆ ಉರುಳಾಗಿ ಪರಿಣಮಿಸಿದೆ. ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಬಂದ್‌ನಲ್ಲಿ ಭಾಗವಹಿಸಲಾಗುತ್ತಿದೆ ಎಂದು ಹೇಳಿದರು.
ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ನಾಗಭೂಷಣ, ಶ್ರೀನಿವಾಸ್, ಮಮತ, ಮೂರ್ತಿ, ಪುಷ್ಪ, ರಾಧಮ್ಮ, ವೆಂಕಟರವಣಪ್ಪ ಇದ್ದರು.

By suddi9

Leave a Reply

Your email address will not be published. Required fields are marked *