ಬಂಟ್ವಾಳ:ಕೇಂದ್ರ, ರಾಜ್ಯ ಸರಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದ ಅವರು ಪಕ್ಷದ ನಾಯಕರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು,ಕಾರ್ಯಕರ್ತರಿಗೆ ಉತ್ಸಾಹ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.29-4

ಅವರು ಭಾನುವಾರ ಬಂಟ್ವಾಳ ಬಿಜೆಪಿ ಮಂಡಲದ ಪ್ರಶಿಕ್ಷಣ ಪ್ರಕೋಷ್ಟದ ವತಿಯಿಂದ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ವಿದ್ಯಾಲಯ ಸಭಾಭವನದಲ್ಲಿ ನಡೆದ ಪ್ರಶಿಕ್ಷಣ ವರ್ಗ ಕಾರ್ಯ ಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.29-2

ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ರಾದ ದೇವಪ್ಪ ಪೂಜಾರಿ ವಹಿಸಿಕೊಂಡು ವ್ಯಕ್ತಿತ್ವ   ಮಾತನಾಡಿ ಬಂಟ್ವಾಳ ವಿಧಾನಸಭಾಕ್ಷೇತ್ರದಲ್ಲಿ ಶೇ.39 ಗ್ರಾಮ ಪಂಚಾಯತಿಗಳಿದ್ದು ಅದರಲ್ಲಿ 35  ಗ್ರಾಂ ಪಂಚಾಯತಿಯಲ್ಲಿ ಬಿಜೆಪಿ ಗೆಲ್ಲಿಸಲು ಸಂಕಲ್ಪಮಾಡಬೇಕಾಗಿದೆ ಎಂದರು.

29-1

29-3ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರದಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಶಿಕ್ಷಣ ಸಂಚಾಲಕರು ನಾರಾಯಣ ಭಂಡಾರಿ ಸ್ವಾಗತಿಸಿ ಸಹ ಸಂಚಾಲಕರು ವೇದನಂದ ಕಾರಂತ್ ವಂದಿಸಿದರು, ಮಂಡಲ ಪ್ರದಾನ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *