ಬಂಟ್ವಾಳ:ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ.ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ.

ದಾಸ ಪರಂಪರೆಯ ಶ್ರೇಷ್ಠ ದಾಸರಲ್ಲಿ ಕನಕದಾಸರು ಒಬ್ಬರುಎಂದು ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಎ. ಅಣ್ಣು ನಾಯ್ಕ್ ಅವರು ಹೇಳಿದರು .

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಗುರುವಾರ ಸರಳವಾಗಿ ನಡೆದ ಭಕ್ತ ಕನಕದಾಸರ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
