ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ಪುರಾಣ ಪ್ರಸಿದ್ಧ ಪಾಂಡವರಿಂದ ನಿರ್ಮಾಣಗೊಂಡ ಶ್ರೀ ಕ್ಷೇತ್ರ ನರಹರಿ ಪರ್ವತದ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು.
ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಅಗತ್ಯ ನೆರವು ಒದಗಿಸುವ ಭರವಸೆಯನ್ನಿತ್ತರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ,ದೇವಳದ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.