ಬಂಟ್ವಾಳ: ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಯುವ ಸೌರಭ ಕಾರ್ಯಕ್ರಮ ಶ್ರೀರಾಮ ವಿದ್ಯಾಕೇಂದ್ರಲ್ಲಿ ಬುಧವಾರ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮ ಉದ್ಘಾಟಿಸಿದರು.IMG-20201216-WA0056

IMG-20201216-WA0054ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮತ್ತು ಸಂಸ್ಥೆಯ ಸಂಚಾಲಕ ವಸಂತ ಮಾಧವ  ಉಪಸ್ಥಿತರಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿ ವಿದ್ಯಾರ್ಥಿಗಳು ಹಾಗೂ ಕಲಾವಿದರು ಭರತನಾಟ್ಯ, ನೃತ್ಯ ರೂಪಕ, ಹರಿಕಥೆ, ಕಂಗಿಲು ನೃತ್ಯ, ಹಾಲಾಕ್ಕಿ ನೃತ್ಯ, ಹುಲಿಕುಣಿತ, ಸುಗಮ ಸಂಗೀತ ಮುಂತಾದ ಮನೋರಂಜನಾ ಕಾರ್ಯಕ್ರಮ ನಡೆಸಿಕೊಟ್ಟರು.IMG-20201216-WA0057

IMG-20201216-WA0055ಇದೇ ವೇಳೆ ವಿದ್ಯಾರ್ಥಿ ಸಂಘದ ಉದ್ಘಾಟನೆಯೂ ನಡೆಯಿತು. 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.IMG-20201216-WA0058

By suddi9

Leave a Reply

Your email address will not be published. Required fields are marked *