ಬಂಟ್ವಾಳ : ಗ್ರಾಮ ಪಂಚಾಯತ್ ಚುನಾವಣೆ ಮತ ಎಣಿಕೆಯು ಡಿ.30 ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಕೊಳ್ನಾಡು ಮತ್ತು ಸಂಗಬೆಟ್ಟುಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ್ತು ಎಣಿಕೆ ಎಜೆಂಟ್ ಗಳಿಗೆ ಸೂಕ್ತ ಸಲಹೆ,ಸೂಚನೆ ಹಾಗೂ ಮಾಹಿತಿ ಕಾರ್ಯಾಗಾರವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಭಾನುವಾರ ನಡೆಸಲಾಯಿತು. 
ಕೊಳ್ನಾಡು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಗಳ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು ಅಯಾ ಅಭ್ಯರ್ಥಿಗಳ ಎಣಿಕೆ ಎಜಂಟ್ ಗಳಿಗೆ ಕುಡ್ತಮೊಗರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆದರೆ,ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು ಅವರ ಎಜೆಂಟರಿಗೆ ಎಣಿಕೆ ಕಾರ್ಯದ ಮಾಹಿತಿ ನೀಡುವ ಕಾರ್ಯಗಾರ ವಾಮದಪದವು ಗಣೇಶ ಮಂದಿರದಲ್ಲಿ ನಡೆಯಿತು.
ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಮಂಡಲ ಚುನಾವಣಾ ಪ್ರಭಾರಿ ದೇವದಾಸ್ ಶೆಟ್ಟಿ ಬಿ. ಸಹಪ್ರಭಾರಿ ಪ್ರಭಾಕರ ಪ್ರಭು ,ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಮಂಡಲ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಅವರು ಮಾಹಿತಿ ನೀಡಿದರು. ಮಹಾಶಕ್ತಿಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕೋಡಿ,ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಎಸ್. ಸಿ ಮೋರ್ಚಾ ಅಧ್ಯಕ್ಷ ಕೇಶವ ದೈಪಲ,ಎಸ್. ಟಿ ಮೋರ್ಚಾ ಅಧ್ಯಕ್ಷ ರಾಮ್ ನಾಯ್ಕ್, ಶಕ್ತಿಕೇಂದ್ರ ಕಾರ್ಯದರ್ಶಿ ಲೋಹಿತ್, ರಮೇಶ್ ರಾವ್ ಪತ್ತುಮುಡಿ,ದರ್ಣಮ್ಮ ಕನ್ಯಾನ ಉಪಸ್ಥಿತರಿದ್ದರು.
