ಮೂಡುಬಿದಿರೆ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅರೆಭಾಷೆ ರಂಗಪಯಣದ ಪ್ರಸ್ತುತಿಯಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶನದ ಸಾಹೇಬ್ರು ಬಂದವೇ’ ಅರೆಭಾಷೆ ಕನ್ನಡ ನಾಟಕವು ಜನವರಿ 6 ಹಾಗೂ 7ರಂದು ಸಾಯಂಕಾಲ 6.30ರಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ
ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಆಸಕ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರೇಕ್ಷಕರು ಮಾಸ್ಕ್ ಧರಿಸಿ ನಾಟಕ ವೀಕ್ಷಿಸುವಂತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
