ಬಂಟ್ವಾಳ: ಜಿಲ್ಲಾ ಕಾನೂನು ವೇದಿಕೆಯು ವಕೀಲರ ಸಂಘಟನೆಗಳಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಸಂಘಟನೆಯಲ್ಲ,ಜಿಲ್ಲೆಯ ಎಲ್ಲಾ ವಕೀಲರನ್ನು ಒಂದೇ ವೇದಿಕೆಯಡಿಯಲ್ಲಿ ಒಗ್ಗೂಡಿಸಲು ರಚನೆಯಾದ ಸಂಸ್ಥೆಯಾಗಿದೆ ಎಂದು ದ.ಕ.ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ಸ್ಪಷ್ಟಪಡಿಸಿದರು.

ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ವೇದಿಕೆಯ ಬಂಟ್ವಾಳ ಘಟಕ ಮತ್ತು ವಕೀಲರ ಸಂಘ ಬಂಟ್ವಾಳ ಇದರ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾನೂನು ವೇದಿಕೆಯ ಧ್ಯೇಯೋದ್ದೇಶವನ್ನು ವಿವರಿಸಿದರು.

ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಕುಮಾರ್ ವೈ, ಪ್ರಧಾನ ಕಾರ್ಯದರ್ಶಿ ಉದನೇಶ್ವರ್, ಸಂಘಟನಾ ಕಾರ್ಯದರ್ಶಿ ವೀರೇಂದ್ರ ಎಂ.ಸಿದ್ದಕಟ್ಟೆ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ವೇದಿಕೆಯ ಬಂಟ್ವಾಳ ಘಟಕದ ಅಧ್ಯಕ್ಷ ಸುರೇಶ್ ಪೂಜಾರಿ ಸ್ವಾಗತಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮಂಗಳೂರಿನ ಹಿರಿಯ ವಕೀಲ ಜಯರಾಮ ಪದಕಣ್ಣಾಯ ಅವರು “ಕ್ರಿಮಿನಲ್ ಕೇಸ್ ನಲ್ಲಿ ಪಾಟೀ ಸವಾಲು ಕೌಶಲ್ಯ”ದ ಬಗ್ಗೆ ಮಾಹಿತಿ ನೀಡಿದರೆ,ಬಂಟ್ವಾಳದ ಹಿರೊಯ ವಕೀಲ ಪುಂಡಿಕಾಯಿ ನಾರಾಯಣ ಭಟ್ ಅವರುಸಿವಿಲ್ ಪ್ರಕ್ರಿಯಾ ಸಂಹಿತೆ ಮತ್ತುಸಿವಿಲ್ ದಾವೆ ಸಲ್ಲಿಸುವಾಗ ಅನುಸರಿಸಬೇಕಾದ ಮುಖ್ಯ ವಿಷಯದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯ ಬಂಟ್ವಾಳ ಘಟಕದ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ವಂದಿಸಿದರು.ಮೋಹನ್ ಕಿಮಾರ್ ಕಡೇಶ್ವಾಲ್ಯ ಕಾರ್ಯಕ್ರಮ ಕ್ತಮ ನಿರೂಪಿಸಿದರು.

By Suddi9 Author

Suddi9

Leave a Reply

Your email address will not be published. Required fields are marked *