ಸುದ್ದಿ9 ಮಂಗಳೂರು : ದ.ಕ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಈ ಕೆಳಗಿನವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಮಂಜುರಾಗಿದೆ. ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಮನೆ ವಸಂತ ಇವರ ವೈದ್ಯಕೀಯ ಚಿಕಿತ್ಸೆಗೆ ರೂ 75,000 ಹಾಗೂ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ನಿವಾಸಿ ಬಾಸ್ಕರ ಆಚಾರ್ಯ ಇವರ ಪುತ್ರ ಮಾಸ್ಟರ್ ಸ್ವಸ್ತಿಕ್ ಇವರ ವೈದ್ಯಕೀಯ ಚಿಕಿತ್ಸೆಗೆ 3 ಲಕ್ಷ ರೂ ಪರಿಹಾರ ಮಂಜೂರಾಗಿರುತ್ತದೆ ಎಂದು ಲೋಕಸಭೆ ಸದಸ್ಯರ ಕಛೇರಿ ಪ್ರಕಟನೆಯಲ್ಲಿ ತಿಳಿಸಿದೆ
