ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ವಸತಿ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ಪೋಳಲಿ ದೇವಳಕ್ಕೆ ಭೇಟಿ ನೀಡಿದರು. ದೇವಳದ ಅರ್ಚಕ ಪರಮೇಶ್ವರ ಭಟ್ ಶ್ರೀ ದುರ್ಗಾಪರಮೇಶ್ವರೀ ದೇವರ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ,ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಕಾಶ್ ಅಂಚನ್, ವೆಂಕಟೇಶ್ ನಾವಡ ಮತ್ತಿತರರು ಇದ್ದರು.
