ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅಲೆಯ ಬೆನ್ನೇರಿ ಹೊರಟ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಹೆಜ್ಜೆ ಹಾಕಿದೆ.
ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 122 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಶಿವಾಜಿ ಹುಟ್ಟಿದ ಈ ನಾಡಲ್ಲಿ ಬಿಜೆಪಿ ಅಧಿಕಾರದ ಧ್ವಜ ಹಾರಿಸುವುದು ಬಹುತೇಕ ಖಚಿತವಾಗಿದೆ.
d
ಸಮೀಕ್ಷೆಗಳ ವರದಿಯ ಪ್ರಕಾರ ಬಿಜೆಪಿ ಗೆಲವು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಅದೇ ರೀತಿ ಇಂದು ಹೊರ ಬಿದ್ದ ಫಲಿತಾಂಶದಲ್ಲಿ ಬಿಜೆಪಿ ಜಯದ ನಗೆ ಬೀರುತ್ತಿದೆ.
ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ಗೆ ಹೀನಾಯ ಸೋಲಾಗಿದ್ದು, ಕೇವಲ 44 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನು 59 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವ ಶಿವಸೇನೆಗೆ ಗರ್ವಭಂಗವಾಗಿದ್ದು, ಮತ್ತೆ ಬಿಜೆಪಿಯೊಂದಿಗೆ ಮೈತ್ರಿಗೆ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

By Suddi9

Leave a Reply

Your email address will not be published. Required fields are marked *