ಕುಪ್ಪೆಪದವು: ಇಲ್ಲಿನ ಹಿಂದೂ ಸೇವಾ ಸಮಿತಿ ಬಾರ್ದಿಲ ಕಲ್ಲಾಡಿ ಇದರ 12 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಭಾನುವಾರ ಜರಗಿತು.
ಸಂಜೆ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇರುವೈಲು ಇವರಿಂದ ಭಜನಾ ಕಾರ್ಯಕ್ರಮ, ನಂತರ ಸತ್ಯನಾರಾಯಣ ಪೂಜೆ ನಡೆದು, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ನಮ್ಮ ಕಲಾವಿದೆರ್ ಬೆದ್ರ ಇವರಿಂದ ಕುಸಾಲ್ದಾ ಗೊಬ್ಬು ನಾಟಕ ಪ್ರದರ್ದನ ನಡೆಯಿತು.
ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
