ಬಂಟ್ವಾಳ:ಇಲ್ಲಿನ ಬೋಳಂತೂರು ನಿವಾಸಿ, ಕಾಂಗ್ರೆಸ್ ಮುಖಂಡ ಬೋಳಂತೂರು ಚಂದ್ರಹಾಸ ಶೆಟ್ಟಿ (೬೬) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

ಬೀಡಿ ಉದ್ಯಮಿಯಾಗಿ, ವೀರಕಂಭ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಬಿ.ಸಿ.ರೋಡು ಪೊಲೀಸ್ ಲೇನ್ ಶ್ರೀ ಅನ್ನಪೂಣರ್ೇಶ್ವರಿ ದೇವಳದ ಜೀಣರ್ೋದ್ಧಾರ ಸಮಿತಿ ಅಧ್ಯಕ್ಷರಾಗಿ ಸಮಾಜಮುಖಿ ಚಟುವಟಿಕೆಗಳಿಂದಲೇ ಗುರುತಿಸಿಕೊಂಡಿದ್ದರು.
