ಮೂಡುಬಿದಿರೆ: ಶ್ರೀ ಧವಲ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಖಾತರಿಕೋಶದ ವತಿಯಿಂದ ಮೆಂಟರಿಂಗ ಸ್ಕಿಲ್ಸ್ ಬಗ್ಗೆ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿಯಾದ ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಹೇಮರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಮಣಿಪಾಲ ಕಾಲೇಜಿನ ಮನಃಶಾಸ್ತ್ರ ಪ್ರಾಧ್ಯಾಪಕಿ ಡಾ. ಕಾವ್ಯಶ್ರೀ ಕೆ. ಬಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು.ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ಕುಮಾರ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿಯಾದ ಡಾ. ಪದ್ಮಜ ಶೆಟ್ಟಿ ಸ್ವಾಗತಿಸಿದರು. ಶ್ರೀ ಪಾರ್ಶ್ವನಾಥ ಅಜ್ರಿ ವಂದಿಸಿದರು. ಡಾ. ರೂಪ ಕಾರ್ಯಕ್ರಮ ನಿರೂಪಿಸಿದರು.
