ಬಂಟ್ವಾಳ:ಇಲ್ಲಿನ ಕುಕ್ಕಿಪಾಡಿ ಗ್ರಾಮದ ಕುದ್ಕೋಳಿ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಕೂಲಿ ಕಾಮರ್ಿಕನಾಗಿರುವ ಆರೋಪಿ ಶೇಖರ ಗೌಡ ಎಂಬಾತನು ಕಳೆದ ೨ ತಿಂಗಳಿನಿಂದ ಅಪ್ರಾಪ್ತ ಬಾಲಕಿಗೆ ತಿಂಡಿ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಮದು ಆರೋಪಿಸಲಾಗಿದೆ.
ಈ ಬಾಲಕಿಯ ಚಲನವಲನದಿಂದ ಅನುಮಾನಗೊಂಡ ಆಕೆಯ ಪೋಷಕರು ಕಳೆದ ಮೂರು ದಿನಗಳ ಹಿಂದೆಯಷ್ಟೇ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆ ಎಸೈ ಸೌಮ್ಯಾ ಜೆ. ತಿಳಿಸಿದ್ದಾರೆ.
