ಮೂಡುಬಿದಿರೆ: ಕೊರೋನಾ ವೈರಸ್ ಬಗ್ಗೆ ಭಯ ಬೇಡಾ ಆದರೆ ಎಚ್ಚರವಿರಲಿ. ಜನರೆಲ್ಲರೂ ತಮ್ಮ ತಮ್ಮ ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಬುಧವಾರದುಣದ ಪುರಸಭಾ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ ಪುರಸಭೆಯು ಪೊಲೀಸ್ ಅದಿಕಾರಿಗಳ ಮೂಲಕ 100 ದಂಡವನ್ನು ಹಾಕಲಾಗುವುದು ಎಂದು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಹೇಳಿದರು.
ಮೂಡುಬಿದಿರೆಯ ಪೇಟೆಯಲ್ಲಿ ಮಂಗಳವಾರ ನಡೆದ ಕೋವಿಡ್ 19 ಜನಾಂದೋಲನ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು.ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸದಸ್ಯರಾದ ಸ್ವಾತಿ ಪ್ರಭು, ಸೌಮ್ಯ ಸಂದೀಪ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಸಿಬಂದಿ ಸುದೀಶ್ ಹೆಗ್ಡೆ, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕ ಕುಮಾರ್, ಹಿರಿಯ ಆರೋಗ್ಯ ಸಹಾಯಕಿ ಶಾಂತಮ್ಮ, ಕಿರಿಯ ಆರೋಗ್ಯ ಸಹಾಯಕಿರಾದ ಗಿರಿಜಾ ಮತ್ತು ಮೀನಾಕ್ಷಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ದ.ಕ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೂಡುಬಿದಿರೆ ಪುರಸಭೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಜಾಥವನ್ನು ಆಯೋಜಿಸಲಾಯಿತು.
