ಮುಂಬಯಿ : ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕನಾಗಿ ಜವಾಬ್ದಾರಿ ವಹಿಸಿದ ಮಂಗಳೂರು ಕೋರ್ಟ್ ವಾರ್ಡ್ನ ಕಾರ್ಪೋರೇಟರ್ ನ್ಯಾಯವಾದಿ ಎ.ಸಿ ವಿನಯರಾಜ್ ಇಂದಿಲ್ಲಿ ಮಾ.೨೭ ರಂದು ಶನಿವಾರ ಮಂಗಳೂರು ಆರ್‌ಸಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಡಾ| ಪೀಟರ್ ಪೌಲ್ ಸಲ್ಡಾನ ಅವರನ್ನು ಬಿಷಪ್ ಹೌಸ್ ಕಛೇರಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೊ, ಮಂಗಳೂರು ಧರ್ಮ ಪ್ರಾಂತ್ಯದ ಪಾಲನಾ ಸಮಿತಿ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಆಲ್ವಾರಿಸ್ ಉಪಸ್ಥಿತರಿದ್ದರು.
