ಮಂಗಳೂರು : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಇಂದಿಲ್ಲಿ ಉಜಿರೆಯ ಡಾ| ಎಂ ಪಿ ಶ್ರೀನಾಥ್ ಅವರು ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್ ಇವರ ಮೂಲಕ ನಾಮಪತ್ರ ಸಲ್ಲಿಸಿದರು.

IMG-20210405-WA0131

ಈ ಸಂದರ್ಭದಲ್ಲಿ ಅವರ ಪತ್ನಿ ಸುಮಾ ಶ್ರೀನಾಥ್, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷ ವಿಜಯಲಕ್ಷ್ಮೀ ಶೆಟ್ಟಿ, ಮಂಗಳೂರುನ ಸೂರಜ್ ಇಂಟರ್ ನ್ಯಾಶನಲ್ ಸ್ಕೂಲ್‌ನ ಅಧ್ಯಕ್ಷ ಮಂಜುನಾಥ್ ರೇವಣ್ಕರ್, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥ ಎಜ್ಯುಕೇಶನಲ್ ಸೊಸೈಟಿಯ ವಿದ್ಯಾರ್ಥಿ  ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ, ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಡಿ. ಯದುಪತಿ ಗೌಡ, ಉಜಿರೆಯ ಪ್ರಸಿದ್ಧ ವೈದ್ಯಧಿಕಾರಿ ಡಾ| ಎಂ.ಎಂ ದಯಾಕರ್ ಹಾಜರಿದ್ದು ಶ್ರೀನಾಥ್ ನಾಮಪತ್ರ ಸಲ್ಲಿಸಿದರು.

By suddi9

Leave a Reply

Your email address will not be published. Required fields are marked *