ಮೂಡುಬಿದಿರೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ ೬ ಮಂದಿ ಪುತ್ರರು ಹಾಗೂ ಪುತ್ರಿ ಇದ್ದಾರೆ.
ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಸ್ವಂತ ಊರಾದ ಮೂಡುಬಿದಿರೆ ಸಮೀಪದ ಬೆಳುವಾಯಿ ಗ್ರಾಮದ ಕಾನಕ್ಕೆ ತಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.
