ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕೆದ್ದಳಿಕೆ ಇದರ ಆಡಿಟೋರಿಯಂ ಹಾಗೂ ಚಿಣ್ಣರ ಮನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಮಂಗಳೂರು ಮಾನವ ಸಂಪನ್ಮೂಲ ಪ್ರಬಂಧಕರು ಶ್ರೀಮತಿ ವೀನಾಕ್ಷಿ ಜಿ., ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಖ್ಯ ಶಿಕ್ಷಕರಾದ ಕುಮಾರ್ ಸಿ., ರಮೇಶ್ ನಾಯಕ್ ರಾಯಿ, ದಿನೇಶ್ ರೈ ಮೊದಲಾದವರು ಉಪಸ್ಥಿತರಿದ್ದರು.
