ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೆಟ್ಲಬೆಟ್ಟುವಿನಿಂದ ಮಾಡದಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಸಂಪರ್ಕ ರಸ್ತೆಯು ವಾಲ್ಪಾಡಿ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾಗಿದೆ.WhatsApp Image 2021-04-22 at 2.53.50 PMಹಿಂದೆ ಒಂದು ಸುತ್ತಾಗಿ ವಾಲ್ಪಾಡಿಗೆ ತಲುಪಬೇಕಾಗಿತ್ತು ಆದರೆ 2 ಕಿ.ಮೀ ದೂರದ ವ್ಯವಸ್ಥಿತವಾದ ಸಂಪರ್ಕ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಯೋಗ ಕೂಡಿ ಬಂದಿದ್ದರಿಂದ ಗ್ರಾಮಸ್ಥರಿಗೆ ವಾಲ್ಪಾಡಿಗೆ ತಲುಪಲು ಸುಲಭದ ದಾರಿಯಲ್ಲಿ ಅವಕಾಶ ಲಭಿಸುತ್ತದೆ ಎಂದರು. ವಾಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಸದಸ್ಯರಾದ ಗಣೇಶ್ ಬಿ.ಅಳಿಯೂರು, ಭವಾನಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಗುತ್ತಿಗೆದಾರ ನವೀನ್ ಹೆಗ್ಡೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *