ಉಜಿರೆ : ಬೆಳ್ತಂಗಡಿ ವಿಧಾನ ಸಭಾಕ್ಷೇತ್ರದಲ್ಲಿ ನೂರುಎಕ್ರೆಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಯೋಜನೆ ಇದೇ ಜೂನ್ ೫  ರಂದು ಶನಿವಾರ ಪ್ರಾರಂಭಗೊಳ್ಳಲಿದೆ ಎಂದು ಅರಣ್ಯ ಸಚಿವಅರವಿಂದ ಲಿಂಬಾವಳಿ ಹೇಳಿದರು. ಅವರು ಧರ್ಮಸ್ಥಳದಲ್ಲಿ ಶನಿವಾರ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ನಿರ್ಧಾರ ಪ್ರಕಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರುಯೋಜನೆಗೆ ಚಾಲನೆ ನೀಡುವರು.PRA_4118ಸಾರ್ವಜನಿಕರ ಸಹಕಾರದೊಂದಿಗೆಜಪಾನಿನ ಮಿಯಾವಾಕಿ ಮಾದರಿಯಲ್ಲಿಅರಣ್ಯ ಬೆಳೆಸುವ ಯೋಜನೆರೂಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು.ಮೇ ೧೫ ರೊಳಗೆ ಈ ಬಗ್ಯೆಅರಣ್ಯ ಇಲಾಖೆ ವತಿಯಿಂದತರಬೇತಿ ನೀಡಿ, ಜೂನ್ ೫ ರಂದು ಸಾಂಕೇತಿಕವಾಗಿಯೋಜನೆಗೆ ಚಾಲನೆ ನೀಡಲಾಗುವುದು. ಬೆಳ್ತಂಗಡಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ ಈ ಯೋಜನೆಯನ್ನು ಮುಂದಿನ ವರ್ಷಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.PRA_4345ಮಂಗಳೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕ್ಕಳ ಅವರನ್ನುಯೋಜನೆಗೆ ಮಾರ್ಗದರ್ಶಿ ಅಧಿಕಾರಿಯಾಗಿಕಾರ್ಯನಿರ್ವಹಿಸುವಂತೆ ಸಚಿವರು ನಿರ್ದೇಶನ ನೀಡಿದರು.ಬೇಡಿಕೆಗನುಗುಣವಾಗಿ ಹಣ್ಣಿನ ಗಿಡಗಳನ್ನು ಮತ್ತು ಬೀಜಗಳನ್ನು ಪೂರೈಸುವಂತೆ ಸಲಹೆ ನೀಡಿದರು. ಆರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಜಾಗತಿಕಗ್ರಾಮದಕಲ್ಪನೆಯೊಂದಿಗೆ ವಿಶ್ವದ ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದಾಗ, ಇಡಿ ವಿಶ್ವವೆ ನಮ್ಮ ಮನೆ ಎಂಬ ಭಾವನೆಯಿಂದ ಭೂಮಿಯನ್ನುಚೆನ್ನಾಗಿರಕ್ಷಣೆ ಮಾಡಿ ಪ್ರಕೃತಿ-ಪರಿಸರವನ್ನು ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ ಬಿಟ್ಟುಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.

ಕಾಡಿನಲ್ಲಿ ಸಾಕಷ್ಟು ಆಹಾರ ಸಿಗದೆ ಕಾಡುಪ್ರಾಣಿಗಳು ನಾಡಿಗೆ ಬಂದುರೈತರ ಕೃಷಿಗೆ ಹಾನಿ ಮಾಡುತ್ತವೆ. ಇದನ್ನುತಡೆಗಟ್ಟಲುಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಬೇಕೆಂದು ಅರಣ್ಯ ಸಚಿವರಿಗೆ ಪತ್ರ ಬರೆದಾಗತಕ್ಷಣ ಸ್ಪಂದಿಸಿದ ಅವರು ಧರ್ಮಸ್ಥಳದಲ್ಲಿ ಸಮಾಲೋಚನಾ ಸಭೆ ನಡೆಸಿರುವುದು ಸಂತೋಷವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾವು, ನೇರಳೆ, ಜಂಬೂ ನೇರಳೆ, ಹಲಸು, ಹೆಬ್ಬಲಸು, ಬಿದಿರು, ನೆಲ್ಲಿ, ಪುನರ್ಪುಳಿ ಮೊದಲಾದ ಹಣ್ಣಿನ ಗಿಡಗಳನ್ನು ಕಾಡಿನಲ್ಲಿ ಬೆಳೆಸಬೇಕೆಂದು ಹೆಗ್ಗಡೆಯವರು ಸಲಹೆ ನೀಡಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯರಾವ್, ಕಾರ್ಯನಿರ್ವಾಹಕ ನಿರ್ದೇಶಕಿ ಕಮಲಾ ಕರಿಕ್ಕಳ, ಮಂಗಳೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್‌ಜೆ., ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್, ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಸ್, ಕೃಷಿ ವಿಭಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದು ಪೂರಕ ಮಾಹಿತಿಯೊಂದಿಗೆ ಸಲಹೆ, ಸೂಚನೆ ನೀಡಿದರು.

By suddi9

Leave a Reply

Your email address will not be published. Required fields are marked *