ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದ ಬಳಿ ಇರುವ ತರಕಾರಿ, ಹಣ್ಣು, ಮೀನು ಹಾಗೂ ಮಾಂಸ ವ್ಯಾಪಾರಸ್ಥರಿಗೆ ಮೂಡುಬಿದಿರೆ ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಇದರ ಜಂಟಿ ಆಶ್ರಯದಲ್ಲಿ ಮಂಗಳವಾರ ನಡೆದ ಕೋವಿಡ್ ಪರೀಕ್ಷಾ ಶಿಬಿರ ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಚಾಲನೆ ನೀಡಿದರು.
ಕೊರೊನಾ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕು. ತಾಲೂಕಿನಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗಲು ನಾಗರಿಕರ ಸಹಕಾರ ಅಗತ್ಯ ಎಂದರುಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ್ ಪೂಜಾರಿ, ಪುರಸಭೆಯ ಸದಸ್ಯರಾದ ರಾಜೇಶ್ ನಾಯ್ಕ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ , ಪ್ರಮುಖರಾದ ಬೋಳ ವಿಶ್ವನಾಥ್ ಕಾಮತ್, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಜೇಶ್, ಮಂಜುನಾಥ್ ಪಿ, ಸುಧೀಶ್ ಹೆಗ್ಡೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
