ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ನೂಯಿ ನಿವಾಸಿ, ಬಿಜೆಪಿ ಸಕ್ರಿಯ ಕಾರ್ಯಕರ್ತ ಹಾಗೂ ಪರೋಪಕಾರಿಯಾಗಿದ್ದ ಸಂತು ಯಾನೆ ಸಂತೋಷ್(35) ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ಗುರುಪುರ ಮುಖಂಡರು, ಕಾರ್ಯಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.
