ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು.df9b79da-899e-4e7b-9847-18547a29b362

66b98bdd-783a-4bc7-bb77-d1db70a00a09ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕೊರೋನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.ca5134a9-931e-48c6-9f1b-8677d8a10e72

ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿಯೂ ಹಂತಹಂತವಾಗಿ ಆಕ್ಸಿಜನ್ ಘಟಕ ಸ್ಥಾಪನೆಯಾಗಲಿದೆ ಎಂದವರು ಹೇಳಿದರು.ಈ ಸಂದರ್ಭದಲ್ಲಿ ಎ.ಸಿ.ಮದನ್ ಮೋಹನ್,ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ,ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ತಹಶಿಲ್ದಾರ್ ರಶ್ಮಿ. ಎಸ್. ಆರ್, ಡಾ! ಉಮೇಶ್ ಅಡ್ಯಾಂತಾಯ, ಇಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.b3d32680-b079-4220-9fff-ea61d1bc64dc

ಕೋವಿಡ್ ಕೇರ್ ಸೆಂಟರ್ ಗೆ ಬೇಟಿ ವಾಮದಪದವು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ , ಎ.ಸಿ.ಮದನ್ ಮೋಹನ್, ತಹಶಿಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೀಡಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಬಿಂದಿಯಾ ನಾಯಕ್ ಅವರಲ್ಲಿ ಮಾಹಿತಿ ಪಡೆದರು.

By suddi9

Leave a Reply

Your email address will not be published. Required fields are marked *