ಬಂಟ್ವಾಳ:ಜಿಲ್ಲೆಯಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಘೋಷಣೆಯಾಗಿದ್ದರೂ ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ವಿರುದ್ಧ ನಗರ ಠಾಣೆ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದ ಪೊಲೀಸರು ಬುಧವಾರ ಬೆಳಿಗ್ಗೆ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ.9btl-Bcroad

ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಕ್ ಡೌನ್ ಮಾಗ೯ಸೂಚಿ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿದ್ದ ೨೦ಕ್ಕೂ ಮಿಕ್ಕಿ ದ್ವಿಚಕ್ರ ವಾಹನ ಸೇರಿದಂತೆ ಸುಮಾರು ೩೫ಕ್ಕೂ ಮಿಕ್ಕಿ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಎಸೈ ಅವಿನಾಶ್ ಗೌಡ, ಮುಖ್ಯಮಂತ್ರಿ ಪದಕ ಪುರಸ್ಕೃತ ಉದಯ ರೈ ಮತ್ತಿತರ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *